(ನ್ಯೂಸ್ ಕಡಬ) newskadaba.com, ಆ.05: ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ. ಅದೇ ರೀತಿ ರಾಜ್ಯದಲ್ಲಿ ಮುಂದಿನ ಮೂರು ವರುಣ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ನೀಡಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಸುಮಾರು 28°C ಮತ್ತು 20°C ಇರಬಹುದೆಂದು ನಿರೀಕ್ಷಿಸಲಾಗಿದೆ.
ಆಗಸ್ಟ್ 5ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಮೈಸೂರು, ಹಾಸನ, ಮಂಡ್ಯ, ತುಮಕೂರು, ಚಾಮರಾಜನಗರ, ರಾಮನಗರ, ಕೊಡಗು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 6ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.









