(ನ್ಯೂಸ್ ಕಡಬ) newskadaba.com, ಆ.05: ಕೇಂದ್ರ ಸಚಿವ ಅಮಿತ್ ಶಾ ಆವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಅಮಿತ್ ಶಾ ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಕೇಂದ್ರ ಸಚಿವರಾಗಿ ಅಮಿತ್ ಶಾ ಅವರು 2019ರ ಮೇ.30ರಿಂದ ಆ.4ವರೆಗೆ ಒಟ್ಟು 2,258 ದಿನಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ಅಡ್ವಾಣಿ ಅವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಒಟ್ಟು 2,256 ದಿನಗಳನ್ನು ಪೂರೈಸಿ ದಾಖಲೆ ಸೃಷ್ಟಿಸಿದ್ದರು. ಇದೀಗ ಈ ದಾಖಲೆಯನ್ನು ಅಮಿತ್ ಶಾ ಮುರಿದಿದ್ದಾರೆ.
ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಕಾಲ ಸೇವೆ ಸಲ್ಲಿಸಿದ ಗೃಹ ಸಚಿವರೆಂಬ ಹೆಗ್ಗಳಿಕೆ ಪಡೆದುಕೊಂಡ ಅಮಿತ್ ಶಾ ಅವರನ್ನು ಎನ್ಡಿಎ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸಿಸಿದ್ದಾರೆ.










