(ನ್ಯೂಸ್ ಕಡಬ) newskadaba.com, ಆ.06: ಜಾರ್ಖಂಡ್ನಲ್ಲಿ ನಡೆಸಿದ್ದ ಚುನಾವಣೆ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ಹೈಕೋರ್ಟ್ ನಿರ್ದೇಶನದಂತೆ ರಾಹುಲ್ ಗಾಂಧಿ ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾದರು. ರಾಹುಲ್ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ.
2018ರ ಸಾರ್ವಜನಿಕ ಸಭೆಯೊಂದರಲ್ಲಿ ಅಮಿತ್ ಶಾ ವಿರುದ್ದ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಕುಮಾರ್ ಎಂಬುವವರು ಪ್ರಕರಣ ದಾಖಲಿಸಿದ್ದರು.










