ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.07:‌ ಕರ್ನಾಟಕದ ಕರಾವಳಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಧಾರವಾಡ, ಬಳ್ಳಾರಿ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ಅಲರ್ಟ್ಘೋಷಿಸಲಾಗಿದೆ. ಕೋಲಾರ, ವಿಜಯನಗರ, ಹಾಸನ, ಚಿಕ್ಕಬಳ್ಳಾಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ರಾಯಚೂರು, ಕಲಬುರ್ಗಿ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.

ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಇನ್ನು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Scroll to Top