ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು

(ನ್ಯೂಸ್‌ ಕಡಬ) newskadaba.com, ಆ.07:‌ ಕಾಡಾನೆ ದಾಳಿ ವೃದ್ದರೊಬ್ಬರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕದ ಬಳಿ ಕಾಡಾನೆ ದಾಳಿ ನಡೆಸಿದ್ದು, ಕೊಪ್ಪದ ಮನೆ ನಿವಾಸಿ ಶಿವಪ್ಪ(72) ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ಪೂವಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ವೇಳೆ ತಕ್ಷಣ ಆನೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Scroll to Top