(ನ್ಯೂಸ್ ಕಡಬ) newskadaba.com, ಆ.07: ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಸವಾಲೆಸೆದಿದ್ದಾರೆ.
ದೆಹಲಿಯಲ್ಲಿ ನಡೆದ ಎಂಎಸ್ ಸ್ವಾಮಿನಾಥನ್ ಶತಮಾನೋತ್ಸವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಇದಕ್ಕಾಗಿ ನಾನು ವೈಯುಕ್ತಿವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ. ಆದರೆ, ಅದಕ್ಕೆ ನಾನು ಸಿದ್ದನಿದ್ದೇನೆ ಎಂದಿದ್ದಾರೆ.










