ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌



(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ಹೇಳಿದ್ದಾರೆ.







ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಕಾರಣ, ಉದ್ದೇಶ ಏನು ಎನ್ನುವ ಬಗ್ಗೆ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.






ಗಲಾಟೆ ಏಕೆ ಆಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಜನರ ಆಗ್ರಹದ ಹಿನ್ನೆಲೆ ತನಿಖೆಗೆ ಎಸ್ಐಟಿ ರಚನೆ ಮಾಡಿದ್ದೇವೆ. ನಿನ್ನೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಎರಡು ಗುಂಪಿನವರು ದೂರು ಕೊಟ್ಟಿದ್ದಾರೆ. ಬಗ್ಗೆ ತನಿಖೆ ಮಾಡಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ.ಯಾರು ಏನು ಹೇಳಿಕೆ ನೀಡುತ್ತಾರೆ ಎನ್ನುವುದು ಮುಖ್ಯವಲ್ಲ, ಸತ್ಯ ಹೊರಬರುವುದಷ್ಟೇ ಮುಖ್ಯ ಎಂದು ತಿಳಿಸಿದ್ದಾರೆ.

error: Content is protected !!
Scroll to Top