ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ/ ಶಾಲೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಎ.13. ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೌಲಾನಾ ಆಜಾದ್ ಮಾದರಿ ಶಾಲೆ ಕುದ್ರೋಳಿ/ ಮಂಜನಾಡಿ/ ಮೂಲರಪಟ್ನ/ ಪುತ್ತೂರು/ಉಲಾಯಿಬೆಟ್ಟು/ ಗುರುಕಂಬಳಗಳಲ್ಲಿ 6ನೇ ತರಗತಿಗೆ ಸರ್ಕಾರಿ ಮುಸ್ಲಿಂ ವಸತಿ ಶಾಲೆ ನಾಟೇಕಲ್/ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ದೇರಳೆಕಟ್ಟೆ ಇಲ್ಲಿಗೆ 6ನೇ ತರಗತಿಯಿಂದ 8 ನೇ ತರಗತಿಯವರೆಗೆ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು ದೇರಳೆಕಟ್ಟೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2018-19 ನೇ ಸಾಲಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಿದ್ದು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.

Also Read  ರಸ್ತೆಯಲ್ಲೇ ಸುಟ್ಟು ಭಸ್ಮವಾದ ಸಿಮೆಂಟ್ ಸಾಗಾಟದ ಲಾರಿ ➤ ಶಾರ್ಟ್ ಸರ್ಕ್ಯೂಟ್ ಶಂಕೆ...!

ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್‌ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ದೂರವಾಣಿ ಸಂಖ್ಯೆ 0824-2211078/2433078 ಅಥವಾ ಆಯಾಯ ತಾಲೂಕಿನ ಮಾಹಿತಿ ಕೇಂದ್ರ ಅಥವಾ ಸಂಬಂಧಿಸಿದ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದ.ಕ.ಜಿಲ್ಲೆ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top