ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

(ನ್ಯೂಸ್‌ ಕಡಬ) newskadaba.com, ಆ.08: ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ರಾಜ್ಯ ಸರ್ಕಾರ ಈಗ ಬೇಕಾದ ಸಾಕ್ಷಿ ಹುಡುಕುತ್ತಿದೆ ಎಂದು ಪ್ರತಾಪ್ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ದೇಗುಲಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಿದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ, ಸೌಜನ್ಯ ಪ್ರಕರಣಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಪ್ರಯತ್ನ ಆರಂಭಿಸಿದೆ ಎಂದು ಆರೋಪಿಸಿದ್ದಾರೆ.

ಧರ್ಮಸ್ಥಳದಲ್ಲಿ ಸಾವಿರಾರು ಕೊಲೆಯಾಗಿದೆ ಎಂದು ಹೇಳುತ್ತಾರೆ. ವಾಸ್ತವದಲ್ಲಿ ಇದು ಸಾಧ್ಯವೇ? ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವುದ್‌ಇಬ್ರಾಹಿಂ ನಾ? ಧರ್ಮಸ್ಥಳವನ್ನು ಟಾರ್ಗೆಟ್ಮಾಡಲಾಗಿದೆ ಎಂದಿದ್ದಾರೆ.

Scroll to Top