ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.08: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್ನಾಯಕ ರಾಹುಲ್ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ಹೇಳಿದ್ದಾರೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.

ರಾಹುಲ್ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ.ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ ಎಂದಿದ್ದಾರೆ.

Scroll to Top