ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ



(ನ್ಯೂಸ್‌ ಕಡಬ) newskadaba.com, ಆ.11 : ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್‌ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.







ಕಳೆದ ಎರಡ್ಮೂರು ದಿನದಿಂದ ನಗರದಲ್ಲಿ ಮಳೆ ಚುರುಕುಗೊಂಡಿದ್ದು, ಶನಿವಾರ ರಾತ್ರಿಯಿಂದ ಸಣ್ಣ ಪ್ರಮಾಣ ಮಳೆ ಆರಂಭಗೊಂಡಿತ್ತು. ಭಾನುವಾರ ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂತು. ನಗರದ ಕೆಲವು ಭಾಗದಲ್ಲಿ ಭಾರೀ ಮಳೆ ಸುರಿಯಿತು.






ಮಹದೇವಪುರದ ಹೂಡಿ ವಾರ್ಡ್‌ನ ವಾರಣಾಸಿಯಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಬಿಬಿಎಂಪಿಯ ಮಳೆ ನೀರುಗಾಲುವೆಯಲ್ಲಿ ಹೂಳು ತುಂಬಿಕೊಂಡ ಹಿನ್ನೆಲೆಯಲ್ಲಿ ಬಿದ್ದ ಮಳೆ ನೀರು ಸರಾಗವಾಗಿ ಹರಿದು ಹೋಗದೇ ಮನೆಗಳಿಗೆ ನೀರು ನುಗ್ಗಿದೆ ಎಂದು ಸ್ಥಳೀಯರು ದೂರಿದ್ದಾರೆ.

error: Content is protected !!
Scroll to Top