ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ – News Kadaba

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.11 : ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರಕಾರ  ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮ ತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ಆರೋಪಿಸಿದರು

Scroll to Top