ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ



(ನ್ಯೂಸ್‌ ಕಡಬ) newskadaba.com, ಆ.12:   ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ.







ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ.






ಹೈಕಮಾಂಡ್​ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್​ ರಾಜಣ್ಣ ಅವರು ಸೋಮವಾರ (ಆ.11) ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಕೆಎನ್​ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.k.n raja

error: Content is protected !!
Scroll to Top