ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ



(ನ್ಯೂಸ್‌ ಕಡಬ) newskadaba.com, ಆ.12: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ.







ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿಬಂದಿದ್ದರು.






ನಂತರ ಅವರನ್ನು ಪತ್ತೆ ಮಾಡಿದ ಅರಣ್ಯ ಇಲಾಖೆ, 25 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ, ಅವರಿಂದಲೇ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ಸಾರುವ ವಿಡಿಯೋ ಮಾಡಿಸಿ ಬಿಡುಗಡೆ ಮಾಡಿಸಿದೆ

error: Content is protected !!
Scroll to Top