ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ



ನ್ಯೂಸ್‌ ಕಡಬ) newskadaba.com ಆ.12 ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿವೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿತು ಎಂದು ಕಾಲಿಸ್ಪೆಲ್ ಪೊಲೀಸ್ ಮುಖ್ಯಸ್ಥ ಜೋರ್ಡಾನ್ ವೆನೆಜಿಯೊ ಮತ್ತು ಫೆಡರಲ್ ವಿಮಾನಯಾನ ಆಡಳಿತ ತಿಳಿಸಿದೆ.







ಸೊಕಾಟಾ ಟಿಬಿಎಂ 700 ಟರ್ಬೊಪ್ರೊಪ್ ವಿಮಾನವು, ನಿಲ್ದಾಣದಲ್ಲಿ ನಿಂತಿದ್ದ ಫ್ಲೈಟ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಉಂಟಾದ ಬೆಂಕಿಯು ಹುಲ್ಲಿನ ಪ್ರದೇಶಕ್ಕೆ ಹರಡಿತು ಎಂದು ವೆನೆಜಿಯೊ ತಿಳಿಸಿದ್ದಾರೆ. ಈ ಸಣ್ಣ ವಿಮಾನ ನಿಲ್ದಾಣವು ವಾಯುವ್ಯ ಮೊಂಟಾನಾದಲ್ಲಿರುವ ಸುಮಾರು 30,000 ಜನವಸತಿಯ ಕಾಲಿಸ್ಪೆಲ್‌ನ ದಕ್ಷಿಣದಲ್ಲಿದೆ. ದಕ್ಷಿಣದಿಂದ ವಿಮಾನವೊಂದು ಬಂದು ರನ್‌ವೇಯ ಕೊನೆಯಲ್ಲಿ ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇಳಿಯಲು ಪ್ರಯತ್ನಿಸುತ್ತಿದ್ದ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತು. ಆದರೆ ಅದು ನಿಂತ ನಂತರ ಪೈಲಟ್ ಮತ್ತು ಮೂವರು ಪ್ರಯಾಣಿಕರು ಸುರಕ್ಷಿತವಾಗಿ ಇಳಿದಿದ್ದಾರೆ ಎಂದು ತಿಳಿಸಲಾಗಿದೆ






error: Content is protected !!
Scroll to Top