ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ



 (ನ್ಯೂಸ್‌ ಕಡಬ) newskadaba.com ಆ.14:  ಬಿಹಾರದಲ್ಲಿ ಆಗಸ್ಟ್ 17ರಿಂದ ‘ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದರು.







ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು, ರೈತರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರೀಕನು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.






ಬಿಹಾರದ ಮಣ್ಣಿನಿಂದ ಪ್ರಾರಂಭವಾಗುವ ಈ ಯಾತ್ರೆ ಸೆಪ್ಟೆಂಬರ್ 1ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ ಮಹಾ ರ‍್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ. ‘ಈ ಬಾರಿ, ಮತ ಕಳ್ಳರ ಸೋಲು ಜನರ ಮತ್ತು ಸಂವಿಧಾನದ ಗೆಲುವು’ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

error: Content is protected !!
Scroll to Top