Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು

(ನ್ಯೂಸ್‌ ಕಡಬ) newskadaba.com, ಆ.15: ಇಂದಿನಿಂದ ಕರ್ನಾಟಕದಾದ್ಯಂತ ವರ್ಷಧಾರೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್ಅಲರ್ಟ್ಘೋಷಣೆ ಮಾಡಲಾಗಿದೆ. ಬೀದರ್‌, ಬೆಳಗಾವಿ, ಕೊಡಗು, ಧಾರವಾಡ, ಕಲಬುರ್ಗಿ, ಹಾವೇರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.

ಗದಗ, ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಕೊಡಗು, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Scroll to Top