ಕೋಡಿಂಬಾಳ: ಕಿರು ಸೇತುವೆಯಿಂದ ಕೆಳಗೆ ಬಿದ್ದ ಸ್ವಿಫ್ಟ್ ಕಾರು ► ಕಾರು ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಎ.15. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಕಿರು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಭಾನುವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳ ಸಮೀಪದ ಅಜ್ಜಿಕಟ್ಟೆಯಲ್ಲಿ ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಕೋಡಿಂಬಾಳದ ಉಂಡಿಲ ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೋಡಿಂಬಾಳದಿಂದ ಕಡಬ ಕಡೆಗೆ ಆಗಮಿಸುತ್ತಿದ್ದ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

error: Content is protected !!
Scroll to Top