(ನ್ಯೂಸ್ ಕಡಬ) newskadaba.com ಕಡಬ, ಆ. 16. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಸುಬ್ರಹ್ಮಣ್ಯ ಅತ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಆದರ್ಶವನ್ನು ಅನುಸರಿಸುವ ಮೂಲಕ ಹಾಗೂ ನಮ್ಮ ಪಾಲಿನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುವ ಮೂಲಕ ದೇಶ ಸೇವೆ ಸಾಧ್ಯ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ಅವರು, “ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತೆಯ ಆದರ್ಶವನ್ನು ಪ್ರತಿಬಿಂಬಿಸುವ ಶಕ್ತಿಯಾಗಲಿ” ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಜೆಸಿಂತಾ ವೇಗಸ್, ಸೈಂಟ್ ಜೋಕಿಮ್ಸ್. ವಿದ್ಯಾಸಂಸ್ಥೆಯ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಅಶ್ರಫ್, ಚಿತ್ರಕಲಾ, ಯೂನುಸ್ ಹಾಗೂ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ, ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಶ್ರೀಲತಾ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ದಕ್ಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ದೇಶ ಪ್ರೇಮವನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ವಿದ್ಯಾರ್ಥಿಗಳಾದ ವಂಶಿ ಸ್ವಾಗತಿಸಿ, ಆಯಿಷತುಲ್ ನಾಫಿಯಾ ವಂದಿಸಿ, ಶ್ರಾವ್ಯ ಕಾರ್ಯಕ್ರಮವನ್ನು ನಿರೂಪಿಸಿದರು.









