(ನ್ಯೂಸ್ ಕಡಬ) newskadaba.com, ಆ.17: ಬಂಗಾಳಕೊಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ಆ.19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು, ಬೆಳಗಾವಿ, ಕೋಲಾರ, ಬೀದರ್, ಕಲಬುರ್ಗಿ, ಚಿತ್ರದುರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.













