(ನ್ಯೂಸ್ ಕಡಬ) newskadaba.com, ಆ.17: ದೇಶದ ಯುವಕರಿಗೆ 18ನೇ ವರ್ಷಕ್ಕೆ ಮತದನಾದ ಹಕ್ಕು ಹಾಗೂ ತಂತ್ರಜ್ಞಾನದ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಏರ್ಪಡಿಸಿದ್ದ ರನ್ ಫಾರ್ ರಾಜೀವ್ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲಿ ನಾನು ಕೂಡ 10 ರಿಂದ 15 ಕಿಮೀ ಓಡುತ್ತಿದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಅವರ ನೆನಪಿಗಾಗಿ ಆಯೋಜಿಸಲಾಗಿದ್ದು, ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕನ್ನು ನೀಡಲಾಗಿತ್ತು. ರಾಜೀವ್ ಗಾಂಧಿ ಅವರು ಅದನ್ನು 18 ವರ್ಷಕ್ಕೆ ಇಳಿಸಿದ್ದು. ವಿರೋಧ ಪಕ್ಷಗಳು ಈ ತೀರ್ಮಾನವನ್ನು ಟೀಕೆ ಮಾಡಿದ್ದವು ಎಂದರು.
16ನೇ ವಯಸ್ಸಿಗೆ ಎಸ್ಎಸ್ಎಲ್ಸಿ ಪಾಸಾದ ಯುವಕರನ್ನು ದೇಶದ ಗಡಿ ಕಾಯಲು ಸೇನೆಗೆ ಸೇಮಿಸುತ್ತೇವೆ. ಪ್ರಜಾಪ್ರಭುತ್ವ ಕಾಯಲು ಅವರಿಗೆ ಮತದಾನದ ಹಕ್ಕು ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯತ್ನಿಂದ ಪಾರ್ಲಿಮೆಂಟ್ವರೆಗೂ ಜನಪ್ರತಿನಿಧಿಗಳು ಆಯ್ಕೆ ಆಗಬೇಕು ಎಂದು ರಾಜೀವ್ ಗಾಂಧಿ ಹೇಳಿದ್ದರು ಎಂದು ವಿವರಿಸಿದರು.












