Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.18:‌ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್ಅಲರ್ಟ್ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ಅಲರ್ಟ್ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪಗೊಂಡಿದೆ. ಪರಿಣಾಮ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ.

ಗದಗ, ಮೈಸೂರು, ಬೀದರ್‌, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಕೊಡಗು, ಬೆಳಗಾವಿ, ಹಾಸನ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ಅಲರ್ಟ್ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Scroll to Top