ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ



(ನ್ಯೂಸ್ ಕಡಬ) newskadaba.com ಆ. 19. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇದರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ ಗರಿಷ್ಟ ರೂ.15 ಲಕ್ಷ  ಸಹಾಯಧನ (ಕೇಂದ್ರ ಸರ್ಕಾರದ ರೂ.6 ಲಕ್ಷ ಹಾಗೂ ರಾಜ್ಯ ಸರ್ಕಾರದ ವತಿಯಿಂದ  ರೂ.9 ಲಕ್ಷ ಸಹಾಯಧನ ನೀಡಿಕೆ) ವೈಯುಕ್ತಿಕ ಕಿರು ಊದ್ದಿಮೆಗಳಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳು (FPO) /ಉತ್ಪಾದಕ ಸೊಸೈಟಿಗಳಿಗೆ ಸಹಾಯಧನ- ಪ್ರತಿ ಘಟಕಕ್ಕೆ ಶೇ.35ರಷ್ಟು (ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುಪಾತ 60:40) ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಶೇ.15ರಷ್ಟು (ಗರಿಷ್ಟ ರೂ.5 ಲಕ್ಷ) ಹೆಚ್ಚುವರಿ ಸಹಾಯಧನ, ಅಲ್ಲದೇ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಕಾರ್ಯನಿರ್ವಹಣಾ ಬಂಡವಾಳ ಹಾಗೂ ಚಿಕ್ಕ ಸಲಕರಣೆಗಳನ್ನು ಖರೀದಿಸಲು ರೂ. 40000 ಪ್ರಾಥಮಿಕ ಬಂಡವಾಳ ನೀಡಿಕೆ ಈ ಯೋಜನೆಯಲ್ಲಿ ಲಭ್ಯವಿದೆ.
ಜಿಲ್ಲೆಯ ಎಲ್ಲಾ ರೈತರು/ ಉದ್ದಿಮೆದಾರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top