(ನ್ಯೂಸ್ ಕಡಬ) newskadaba.com, ಆ.18: ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.
ಹುತಾತ್ಮ ಯೋಧರನ್ನು ದಿನೇಶ್ ನಾಗ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಯೋಧರಿಗೆ ಸ್ಥಳಕ್ಕೆ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಜಿಆರ್ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ನಕ್ಸಲರು ಸುಧಾರಿತ ಸ್ಪೋಟಕ(ಐಇಡಿ) ಸ್ಪೋಟಿಸಿದ ಪರಿಣಾಮ ಜಿಲ್ಲಾ ಮೀಸಲು ಪಡೆ(ಡಿಜಿಆರ್)ಯ ಯೋಧರೊಬ್ಬರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಭಾನುವಾರದಿಂದ ಕಾರ್ಯಾಚರಣೆ ಶುರುವಾಗಿತ್ತು, ಇಂದು ಬೆಳಗ್ಗೆ ಕೂಡ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ಸಂದರ್ಭ ಐಇಡಿ ಸ್ಪೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.










