ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ



(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.







ಕೊಡಗಿನಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನ ಪರದಾಡುವಂತಾಗಿದೆ. ಹಾಸನದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಭಾರೀ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ.






error: Content is protected !!
Scroll to Top