ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

(ನ್ಯೂಸ್‌ ಕಡಬ) newskadaba.com, ಆ.18: ಸಿಎಂ ಸಿದ್ದರಾಮಯ್ಯ ಅವರು ಕೊಲೆಗಳನ್ನು ಮಾಡಿಸಿದ್ದಾರೆ ಎಂದು ಮಹೇಶ್‌ ತಿಮರೋಡಿ ಆರೋಪ ಮಾಡಿದ್ದಾರೆ. ಅವರು ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಎಂದರೆ ನಾನು ನಂಬುವುದಿಲ್ಲ. ಈ ಬಗ್ಗೆಯೂ ತನಿಖೆ ನಡೆಯಲಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಆರೋಪ ಮಾಡಿದವರ ವಿರುದ್ದ ತನಿಖೆ ನಡೆಸದಿದ್ದಲ್ಲಿ ಸರ್ಕಾರವೂ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ನಾವು ಅನುಮಾನ ಪಡಬೇಕಾಗುತ್ತದೆ ಎಂದಿದ್ದಾರೆ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಅಲ್ಲಿಗೆ ನಾವು ಹೋಗಿ ಹೋರಾಟ ಮಾಡದೇ ಕನ್ವರ್ಟ್‌ ಆದವರು, ಮತಾಂತರಕ್ಕೆ ಬೆಂಬಲ ನೀಡುವವರು ಹೋಗಿ ಹೋರಾಟ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

Scroll to Top