(ನ್ಯೂಸ್ ಕಡಬ) newskadaba.com ಕಡಬ, ಆ. 18. ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನೆಟ್ಟಣದ ಮೌಂಟ್ ಸಿಯೋನ್ ಶಾಲೆಯ ಆಶ್ರಯದಲ್ಲಿ ಶಟಲ್ ಬಾಡ್ಮಿಂಟನ್ ಕ್ರೀಡಾಕೂಟವು ಕುಲ್ಕುಂದದಲ್ಲಿ ನಡೆಯಿತು.
ನಾಲ್ಕು ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಬಾರಿ ಕಡಬ ವಲಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನಾಲ್ಕು ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಫೈನಲ್ ಹಂತ ಪ್ರವೇಶಿಸಿದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಬಾಲಕ, ಬಾಲಕಿಯರ ಹಾಗೂ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಪ್ರಶಸ್ತಿ ತನ್ನದಾಗಿಸಿದೆ.














