Asia Cup 2025: ಇಂದು ಭಾರತ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.19: 2025ರ ಏಷ್ಯಾಕಪ್‌ ಸೆ.9ರಿಂದ ಆರಂಭವಾಗಲಿದೆ. ಈ ಟೂರ್ನಮೆಂಟ್‌ಗಾಗಿ ಭಾರತೀಯ ತಂಡವನ್ನು ಇಂದು ಬಿಸಿಸಿಐ ಸಭೆ ಕರೆದು ಘೋಷಣೆ ಮಾಡಲಿದೆ.

ಮೊದಲು ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು, ಬಳಿಕ ಮುಖ್ಯ ಆಯ್ಕೆಗಾರ ಅಜಿತ್‌ ಅಗರ್ಕರ್‌ ಹಾಗೂ ತಂಡದ ನಾಯಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿ ತಂಡವನ್ನು ಘೋಷಣೆ ಮಾಡಲಿದ್ದಾರೆ. ಇದರೊಂದಿಗೆ ಐಸಿಸಿ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ಗೆ ಕೂಡ ಟೀಂ ಇಂಡಿಯಾವನ್ನು ಹೆಸರಿಸಲಿದ್ದಾರೆ.

ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪುರುಷ ಹಾಗೂ ಮಹಿಳಾ ತಂಡಗಳಿಗೆ ಆಯ್ಕೆ ನಡೆಯಲಿದೆ. ಏಷ್ಯಾಕಪ್‌ಗೆ ಪುರುಷರ ತಂಡವನ್ನು ಹಾಗೂ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿ, ಮಹಿಳಾ ಕ್ರಿಕೆಟ್‌ ವಿಶ್ವಕಪ್‌ಗೆ ಮಹಿಳಾ ತಂಡವನ್ನು ಆಯ್ಕೆ ಮಾಡಲಾಗುತ್ತದೆ.

ಪುರುಷರ ತಂಡದ ಸಭೆ ಮಧ್ಯಾಹ್ನ 1.30ಕ್ಕೆ ನಡೆದರೆ, ಮಹಿಳಾ ತಂಡದ ಸಭೆ ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಬಳಿಕ ನಾಯಕ, ನಾಯಕಿ ಹಾಗೂ ಆಯ್ಕೆ ಸಮಿತಿಯ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

Scroll to Top