ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..!

(ನ್ಯೂಸ್ ಕಡಬ) newskadaba.com ಆ. 20. ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ಶಾಂತಿನಗರದಲ್ಲಿ ನಡೆದಿದೆ.

 

ಮಹಿಳೆ ಮನೆ ಸಮೀಪ ಬಾವಿಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರಾದ ಮುಳುಗುತಜ್ಞ ಅಬ್ಬಾಸ್ ನೀರಿಗಿಳಿದು ಮಹಿಳೆಯನ್ನು ಅಗ್ನಿಶಾಮಕ ದಳದವರ ಸಹಾಯದಿಂದ ಮೇಲೆತ್ತಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top