(ನ್ಯೂಸ್ ಕಡಬ) newskadaba.com ಆ. 20. ಏಷ್ಯಾಕಪ್ ಟೂರ್ನಿಗೆ ಕೊನೆಗೂ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ ಉಪನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.
ಮೊಹಮ್ಮದ್ ಸಿರಾಜ್ ಗೆ ವಿಶ್ರಾಂತಿ ನೀಡಲಾಗಿದ್ದು, ಗಾಯಾಳು ರಿಷಭ್ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇನ್ನು ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರೆಂದರೆ, ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡರೆ, ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷಯ್ ಪಟೇಲ್ ಹಾಗೂ ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಹಾಗೆಯೇ ಬೌಲರ್ಗಳಾಗಿ ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ.
ಏಷ್ಯಾಕಪ್ ವೇಳಾಪಟ್ಟಿ:
ಸೆ.10: ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ.
ಸೆ.14: ಟೀಮ್ ಇಂಡಿಯಾದ ಎರಡನೇ ಎದುರಾಳಿ ಪಾಕಿಸ್ತಾನ.
ಸೆ.19: ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ.
ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು 2 ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ.














