ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು



(ನ್ಯೂಸ್‌ ಕಡಬ) newskadaba.com, ಆ.21:‌‌ ಹಿಂದೂಮುಸ್ಲಿಮರ ಮಧ್ಯೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ಯತ್ನಾಳ್ ವಿರುದ್ದ ಕೊಪ್ಪಳ ನಗರ ಪೊಲೀಸ್ಠಾಣೆಯಲ್ಲಿ ಎಫ್ಐಆರ್ದಾಖಲಾಗಿದೆ.





.3ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕನ ಕೊಲೆ ಆಗಿತ್ತು. .10ರಂದು ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಲು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ತರುವುದಾಗಿ ಹೇಳಿಕೆ ನೀಡಿದ್ದರು. ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ರಾಜ್ಯದಲ್ಲಿ ಸದ್ಯ ಸಾಬರ ಸರ್ಕಾರವಿದೆ ಎಂದು ಹೇಳಿದ್ದರು.






ಹಿನ್ನೆಲೆ ಕೊಪ್ಪಳದ ಕುವೆಂಪು ನಗರದ ನಿವಾಸಿ ಅಬ್ದುಲ್ಕಲಾಂ ದೂರು ನೀಡಿದ್ದಾರೆ. ಯತ್ನಾಳ್ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನು ಕೀಳಾಗಿ, ಕೆಟ್ಟ ಮನಸ್ಥಿತಿಯಲ್ಲಿ ನೋಡುವುದಲ್ಲದೇ, ಅವರಿಗೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top