ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ

(ನ್ಯೂಸ್ಕಡಬ) newskadaba.com, ಆ.21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ಸಿಂಗ್ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ವಿಶ್ವವಿಖ್ಯಾತ ದಸರಾ ಮಹೋತ್ಸವದ ಭಾಗವಾಗಿ ಏರ್ಶೋ ನಡೆಸಲು ಒಪ್ಪಿಗೆ ನೀಡಿದ್ದಕ್ಕಾಗಿ ರಾಜನಾಥ್ಸಿಂಗ್ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಮಂದಿ ಬರುತ್ತಾರೆ. ಶ್ರದ್ದಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ಶೋ ನಡೆಸಲು ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Scroll to Top