ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ



(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿತ್ತು.







ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ಜನಸಂದಣಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮತ್ತು ಸಾಮೂಹಿಕ ಸಭೆಯನ್ನು ನಿರ್ವಹಿಸಲು, ಕಾನೂನುಬಾಹಿರ ಸಭೆಗಳನ್ನು ತಡೆಯಲು ಮತ್ತು ಅಪರಾಧಗಳಿಗೆ ಶಿಕ್ಷೆಗೆ ನಿಬಂಧನೆಗಳನ್ನು ಒದಗಿಸಲು ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆಯ ಸ್ಥಳದಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.






 

error: Content is protected !!
Scroll to Top