ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!

(ನ್ಯೂಸ್‌ ಕಡಬ) newskadaba.com, ಆ.20 ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ.

ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಕಾರಣ ಮಹೇಶ್ ತಿಮರೋಡಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿರುವುದನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದಾರೆ. ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಅದಕ್ಕೆ ಸರಿಯಾದ ಉತ್ತರ ನೀಡದೇ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.

Scroll to Top