(ನ್ಯೂಸ್ ಕಡಬ) newskadaba.com, ಆ.22: ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಯಾದಗಿರಿ, ಉತ್ತರ ಕನ್ನಡ, ಕಲಬುರ್ಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಧಾರವಾಡ, ಬೀದರ್ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ವರ್ಷಾಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.













