(ನ್ಯೂಸ್ ಕಡಬ) newskadaba.com ಸವಣೂರು, ಎ.16. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಅಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಅವರು, ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.ಭಾರತದ ಸಂವಿಧಾನವನ್ನು ರಚಿಸಿದ ಇವರು ‘ಸಂವಿಧಾನ ಶಿಲ್ಪಿ’ ಎಂದರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿ ವರ್ಗದವರಾದ ಮಮತಾ, ಗೀತಾ, ಹರ್ಷಿತ್, ಸಂತೋಷ್, ಉಪಸ್ಥಿತರಿದ್ದರು.
