(ನ್ಯೂಸ್ ಕಡಬ) newskadaba.com, ಆ.23: ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಹಾಗೂ ಸಂಶೋಧನಾ ಕೇಂದ್ರ ತಿಳಿಸಿದೆ.
ಮಾಘಂಗ್ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೇಪಾಳ ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕ ಮಂದಿ ಸಾವನ್ನಪ್ಪಿದ್ದರು.













