ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ



(ನ್ಯೂಸ್ಕಡಬ) newskadaba.com,ಆ.23 ಬೆಂಗಳೂರು: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.







ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.






ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ. ಪ್ರವಾಹ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಭಾರೀ ಮಳೆಯಿಂದಾಗಿ ಥರಾಲಿ-ಗ್ವಾಲ್ಡಮ್ ರಸ್ತೆ ಮತ್ತು ಥರಾಲಿ-ಸಾಗ್ವಾರಾ ರಸ್ತೆಗಳು ಮುಚ್ಚಲ್ಪಟ್ಟಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ನಿನ್ನೆ ರಾತ್ರಿ NDRF ಮತ್ತು SDRF ತಂಡಗಳು ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

error: Content is protected !!
Scroll to Top