ಆಗಸ್ಟ್ 25 ರಂದು ಗಣೇಶ ಚತುರ್ಥಿ ವಿಶೇಷ ವಸ್ತು ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಗಣೇಶ ಹಬ್ಬದ ವಿಶೇಷ ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮತ್ತು ಮಾರಾಟ  ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ  ಆಗಸ್ಟ್ 25 ರಂದು  ಬೆಳಿಗ್ಗೆ 10 ರಿಂದ ನಡೆಯಲಿದೆ.
ಗ್ರಾಮೀಣ ಮಹಿಳೆಯರು ಮನೆಯಲ್ಲೇ ತಯಾರಿಸಿದ ಹೋಮ್ ಪ್ರಾಡಕ್ಟ್‍ ಗಳು, ಸಾವಯವ ತರಕಾರಿಗಳು, ಪರಿಶುದ್ಧ ಕಾಡಿನ ಜೇನು ತುಪ್ಪ, ಕರಕುಶಲ ವಸ್ತುಗಳು ಕೈಗೆಟುಕುವ ದರದಲ್ಲಿ ಲಭ್ಯವಿರುತ್ತದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆ ತಿಳಿಸಿದೆ.

Scroll to Top