ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಮತ್ತು ಮಂಜನಾಡಿ ಇಲ್ಲಿಗೆ ದೈಹಿಕ ಶಿಕ್ಷಕರ ಹುದ್ದೆಗೆ ಮತ್ತು ಮೌಲಾನ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ ಭೌತಶಾಸ್ತ್ರ, ಗಣಿತಶಾಸ್ತ್ರ ವಿಷಯದಲ್ಲಿ ಬೋಧಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂ.ಸಂ :8660948731, 9686445399, 9844634539 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top