ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಸಂಬಂಧಿಸಿದಂತೆ, ಸ್ನಾತಕೋತ್ತರ ವಿಭಾಗಗಳಲ್ಲಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ಇಲ್ಲಿ ಭರ್ತಿಯಾಗದೇ ಖಾಲಿ ಇರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುತ್ತದೆ. UUCMS ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು  ವೆಬ್‍ಸೈಟ್ https://mangaloreuniversity.ac.in/mu-uucms ನಲ್ಲಿ ಲಭ್ಯವಿದೆ.







ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆಗಸ್ಟ್ 30 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ತೊಂದರೆಯಾದಲ್ಲಿ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.






 

ಅರ್ಜಿ ನಮೂನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಿಂದ ಪಡೆದುಕೊಳ್ಳಬೇಕು. ಸೀಟು ಲಭ್ಯತೆಯ ಬಗ್ಗೆ ಸಂಬಂಧಪಟ್ಟ ವಿಭಾಗದ ಅಧ್ಯಕ್ಷರು/ ಕಾರ್ಯಕ್ರಮಗಳ ಸಂಯೋಜಕರನ್ನು ಸಂಪರ್ಕಿಸಬಹುದು ಹಾಗೂ ಹೆಚ್ಚಿನ  ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಮೂಲಕ  ಪಡೆದುಕೊಳ್ಳಬಹುದು ಎಂದು  ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top