“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ



(ನ್ಯೂಸ್‌ ಕಡಬ) newskadaba.com,ಆ.23 ನವದೆಹಲಿ : ಶನಿವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ರಾಷ್ಟ್ರೀಯ ಬಾಹ್ಯಾಕಾಶ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು, ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಘೋಷಿಸಿದರು. ಇಂದು ಭಾರತವು ಸೆಮಿ-ಕ್ರಯೋಜೆನಿಕ್ ಎಂಜಿನ್‌ಗಳು ಮತ್ತು ಎಲೆಕ್ಟ್ರಿಕ್ ಪ್ರೊಪಲ್ಷನ್‌ನಂತಹ ಅದ್ಭುತ ತಂತ್ರಜ್ಞಾನಗಳಲ್ಲಿ ವೇಗವಾಗಿ ಮುಂದುವರಿಯುತ್ತಿದೆ.







ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಯಶಸ್ಸನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು, ದೇಶವು ಶೀಘ್ರದಲ್ಲೇ ಗಗನಯಾತ್ರಿಗಳ ಗುಂಪನ್ನು ನಿರ್ಮಿಸಲಿದೆ ಎಂದು ಘೋಷಿಸಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಬಹುನಿರೀಕ್ಷಿತ ಭಾರತೀಯ ಅಂತರಿಕ್ಷ ನಿಲ್ದಾಣ  ಮಾಡ್ಯೂಲ್‌ನ ಮಾದರಿಯನ್ನು ಅನಾವರಣಗೊಳಿದ ಬಳಿಕ ಪ್ರಧಾನಿಯಿಂದ ಈ ಹೇಳಿಕೆ ಬಂದಿದೆ    .






ಇಂದು ಭಾರತವು ಸೆಮಿ-ಕ್ರಯೋಜೆನಿಕ್ ಎಂಜಿನ್‌ಗಳು ಮತ್ತು ಎಲೆಕ್ಟ್ರಿಕ್ ಪ್ರೊಪಲ್ಷನ್‌ನಂತಹ ಅದ್ಭುತ ತಂತ್ರಜ್ಞಾನಗಳಲ್ಲಿ ವೇಗವಾಗಿ ಮುಂದುವರಿಯುತ್ತಿದೆ. ಶೀಘ್ರದಲ್ಲೇ, ನಮ್ಮೆಲ್ಲ ವಿಜ್ಞಾನಿಗಳ ಕಠಿಣ ಪರಿಶ್ರಮದಿಂದ, ಭಾರತವು ಗಗನಯಾನದೊಂದಿಗೆ ಮೇಲೇರಲಿದೆ ಮತ್ತು ಮುಂಬರುವ ದಿನಗಳಲ್ಲಿ, ಭಾರತವು ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 3 ದಿನಗಳ ಹಿಂದೆ ನಾನು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾದೆ. ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆ ತುಂಬಿದರು. ಅವರು ನನಗೆ ತ್ರಿವರ್ಣ ಧ್ವಜವನ್ನು ತೋರಿಸುತ್ತಿದ್ದ ಕ್ಷಣ, ಅನುಭವ ಪದಗಳಿಗೆ ಮೀರಿದ್ದು ಎಂದು ಅವರು ಹೇಳಿದರು.

error: Content is protected !!
Scroll to Top