ಮೂಡುಬಿದಿರೆ : ರಸ್ತೆ ವಿಭಾಜಕಕ್ಕೆ ಕಾರು ಡಿಕ್ಕಿ – ಚಿಕಿತ್ಸೆ ಫಲಿಸದೆ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಆ.‌25 ಮೂಡುಬಿದಿರೆ : ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್‌ ಸಿದ್ದಕಟ್ಟೆ (25) ಅವರು ಆದಿತ್ಯವಾರ ಮೃತಪಟ್ಟಿದ್ದಾರೆ.

ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ಹೊಟೇಲೊಂದರ ಕಾರ್ಮಿಕ ವೇಣೂರು ಪೆರ್ಮುಡೆ ನಿವಾಸಿ ಸುಮಿತ್‌ ಮೃತಪಟ್ಟವರು. ಜತೆಗಿದ್ದ ಸಂದೀಪ್‌ ಸಹಿತ ನಾಲ್ವರು ಗಾಯಗೊಂಡಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Scroll to Top