ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ



(ನ್ಯೂಸ್‌ ಕಡಬ) newskadaba.com, ಆ.26 ಕಾರ್ಕಳ:  ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.







ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ.






ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top