ಕಾರು – ಬೈಕ್ ಡಿಕ್ಕಿ: ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.05. ಕಾರು ಹಾಗೂ ಬೈಕ್ ‌ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಬೆಳ್ಮಣ್ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಉಚ್ಚಿಲ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top