ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ

(ನ್ಯೂಸ್‌ ಕಡಬ) newskadaba.com, ಆ.26:‌ ಕೊತ್ತಲವಾಡಿ ಸಿನಿಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್‌ಸ್ಟಾರ್‌ ಯಶ್ ತಾಯಿ ಪುಷ್ಪಾ ಅರುಣ್‌ ಕುಮಾರ್‌ ಈಗ ವಿತರಣಾ ವಲಯಕ್ಕೆ ಕಾಲಿಟ್ಟಿದ್ದಾರೆ. ಯಶ್‌ ತಾಯಿಯ ನಡೆಯು ಸಿನಿಮಾ ಪ್ರಿಯರಿಗೆ ಅಚ್ಚರಿ ಮೂಡಿಸಿದೆ.‌

ಪಿಎ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಥ್ರೂ ಶ್ರೀಧರ್‌ ಕೃಪಾ ಕಂಬೈನ್ಸ್‌ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಪುಷ್ಪಾ ಅರುಣ್‌ ಕುಮಾರ್‌ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸೆ.5ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

ಈ ಬಗ್ಗೆ ಪುಷ್ಪಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಘಾಟಿ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಸಿನಿಮಾಗಳನ್ನು ಪಿಎ ಪ್ರೊಡಕ್ಷನ್ಸ್‌ ಮೂಲಕ ವಿತರಣೆ ಮಾಡುತ್ತಿದ್ದೇನೆ. ಸಿನಿಮಾ ನಿರ್ಮಾಣಕ್ಕೆ ಬಂದಾಗ ಅನೇಕ ಮಂದಿ ಸಾಕಷ್ಟು ಪ್ರೀತಿ ತೋರಿಸಿದ್ದೀರಿ. ಅದೇ ಪ್ರೀತಿ ವಿತರಕಿಯಾದಾಗಲೂ ಇರಲಿ. ನಿಮ್ಮಲ್ಲರ ಪ್ರೋತ್ಸಾಹ ಬೇಕು ಎಂದು ಪುಷ್ಪಾ ಹೇಳಿದ್ದಾರೆ.

Scroll to Top