Gold Rate: ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಚಿನ್ನದ ಬೆಲೆ ಸತತ ಎರಡನೇ ಬಾರಿಗೆ ಏರಿಕೆಯಾಗಿದೆ. ಇಂದು ಗಣೇಶ ಹಬ್ಬದ ದಿನ 35 ರೂ. ಹೆಚ್ಚಳವಾಗಿದೆ. ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ.

ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ಚಿನ್ನದ ಬೆಲೆ 93,900 ರೂ. ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,02,440 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 93,900 ರೂ. ಆಗಿದೆ. ಬೆಳ್ಳಿ ಬೆಲೆ ಗ್ರಾಂಗೆ 12,000 ರೂ. ಇದೆ.

ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 94,050 ರೂ. ಇದೆ. ಅಹಮದಾಬಾದ್‌: 93,950 ರೂ., ಜೈಪುರ: 94,050 ರೂ. ಇದೆ.

Scroll to Top