(ನ್ಯೂಸ್ ಕಡಬ) newskadaba.com ಕಡಬ, ಆ. 28. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮಂಗಳೂರಿನ ಪಿ.ಎಂ.ಶ್ರೀ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ -35 ಕೆ.ಜಿ ಹುಡುಗರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ಲೋಹಿತ್ ಕುಮಾರ್ ಹಾಗೂ -45ಕೆ.ಜಿ ವಿಭಾಗದಲ್ಲಿ 10ನೇ ತರಗತಿಯ ಚಿಂತನ್.ಕೆ. ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ತರಬೇತಿಯನ್ನು ನೀಡಿರುತ್ತಾರೆ.
ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಗುರುಗಳು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದಿಸಿರುತ್ತಾರೆ.














