ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌



(ನ್ಯೂಸ್‌ ಕಡಬ) newskadaba.com, ಆ.28:‌‌ ಜಮ್ಮುಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ಸೆಕ್ಟರ್ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ.





ಉಗ್ರರ ನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಹಾಗೂ ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಭಾರತೀಯ ಸೇವೆಯು ಚಿನಾರ್ಕಾರ್ಪ್ಸ್ಎಕ್ಸ್ನಲ್ಲಿ ಪೋಸ್ಟ್ಮಾಡಿದೆ.






ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ.

error: Content is protected !!
Scroll to Top