ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌



(ನ್ಯೂಸ್‌ ಕಡಬ) newskadaba.com, ಆ.28:‌‌ ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ನೋವು ಅನುಭವಿಸಿದ್ದ ರಾಯಲ್ಚಾಲೆಂಜರ್ಸ್ಬೆಂಗಳೂರು ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್ಸೆಂಟರ್ತೆರೆಯಲು ಆರಂಭಿಸಿದೆ.





ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್ವೊಂದನ್ನು ಮಾಡಿರುವ ಆರ್ಸಿಬಿ, ನಾವು ಪೋಸ್ಟ್ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ, ಜೂ.4 ಘಟನೆ ಎಲ್ಲವನ್ನನೂ ಬದಲಾಯಿಸಿತು. ದಿನ ನಮ್ಮ ಹೃದಯವನ್ನು ಮುರಿಯಿತು. ನಂತರ ಮೌನವು ಕೇವಲ ನಿಶ್ಶಬ್ಧವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ದಾಂಜಲಿ. ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತುನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ದೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ ಆರ್ಸಿಬಿ ಕೇರ್ಸ್.‌ ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಯೋಜನೆ. ಇಂದು ನಾವು ಮರಳಿದ್ದೇವೆ: ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ. ಆರ್ಸಿಬಿ ಕೇರ್ಸ್‌: ನಾವು ಸದಾ ನಿಮ್ಮೊಂದಿಗಿದ್ದೇವೆ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಎಂದು ಬರೆದುಕೊಂಡಿದೆ.






error: Content is protected !!
Scroll to Top